ಸುಳ್ಯ: ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ. ಒಬ್ಬ ನಾಗರಿಕನಾಗಿ ಬದುಕಲು ಮೌಲ್ಯಗಳು ಮತ್ತು ಸಾಂಸ್ಕೃತಿಕ ನೆಲೆಗಟ್ಟು ಅಗತ್ಯ ಎಂದು ಸುಳ್ಯದ ಸ್ನೇಹ ಶಾಲಾ ಆವರಣದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಪದಕ ಪುರಸ್ಕೃತ, ಸುಳ್ಯದ ವೃತ್ತ ನಿರೀಕ್ಷಕ ಶ್ರೀ ಸತೀಶ್ ಬಿ. ಎಸ್. ರವರು ಹೇಳಿದರು.
ಅವರು ಸ್ನೇಹ ಶಿಕ್ಷಣ ಸಂಸ್ಥೆಯ ವತಿಯಿಂದ ಎ. 6ರಂದು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಅಭಿನಂದನಾ ಭಾಷಣ ಮಾಡಿ ಶ್ರೀ ಸತೀಶ್ ಬಿ. ಎಸ್. ಇವರನ್ನು ಸನ್ಮಾನಿಸಿದರು.
ಆರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ವಿದ್ಯಾಶಾಂಭವ ಪಾರೆ ಸ್ವಾಗತಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀಮತಿ ಲತಾ ಮಧುಸೂದನ್, ಪೋಷಕರಾದ ಶ್ರೀಮತಿ ವಿದ್ಯಾ ಶ್ರೀಕೃಷ್ಣ ಭಟ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮೀ ದಾಮ್ಲೆ ವಂದಿಸಿದರು. ಶಿಕ್ಷಕಿ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.