ನವದೆಹಲಿ: ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸಿ, ರಾಹುಲ್ ಗಾಂಧಿಯವರನ್ನು ಉಪಪ್ರಧಾನಿಯನ್ನಾಗಿಸಿದರೆ ಕೇಂದ್ರದಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ತಿಳಿಸಿದ್ದಾರೆ.
ಹಿಂದೂಸ್ಥಾನ್ ಟೈಮ್ಸ್ ಲೀಡರ್ಶಿಪ್ ಸಮಿತ್ನಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ನನ್ನ ಹಳೆಯ ಸ್ನೇಹಿತ. ಅವರು ಮುಲಾಯಂ ಅವರನ್ನು ಪ್ರಧಾನಿಯನ್ನಾಗಿಸಲು, ರಾಹುಲ್ ಅವರು ಉಪ ಪ್ರಧಾನಿಯಾಗಲು ಒಪ್ಪಿದರೆ ಕೇಂದ್ರದಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಗೆ ಈಗಲೇ ಎಸ್ ಎನ್ನುತ್ತೇನೆ ಎಂದಿದ್ದಾರೆ.
ಬಿಎಸ್ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಸಾಧ್ಯತೆ ತಳ್ಳಿ ಹಾಕಿದ ಅವರು, ನಮ್ಮ ಸರ್ಕಾರ ಉತ್ತಮ ಕಾರ್ಯಮಾಡಿದ್ದು, ಅದರ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ, ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ವಿವಾದಾತ್ಮಕ ಸಚಿವ ಅಜಂ ಖಾನ್ ಪರ ವಹಿಸಿ ಮಾತನಾಡಿದ ಅವರು, ನಾವು ಯಾಕೆ ಅವರನ್ನು ಪದಚ್ಯುತಿಗೊಳಿಸಬೇಕು. ಅವರು ಮಾತನಾಡಿದ್ದನ್ನು ಸರಿಯಾಗಿ ಕೇಳಿಸಿಕೊಂಡರೆ ಅವರ ಮಾತು ನಮಗೆ ಅರ್ಥವಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.