ಪುತ್ತೂರು : ಮಾನವ ಕಳ್ಳ ಸಾಗಾಣೆಯು ಒಂದು ಗಂಭೀರ ಅಪರಾಧ.ಹಿಂದುಳಿದ ಪ್ರದೇಶದಲ್ಲಿರುವ ದುರ್ಬಲ ವರ್ಗದವರ ಆರ್ಥಿಕ ಸಬಲೀಕರಣದಿಂದ ಅದನ್ನು ತಡೆಗಟ್ಟಬಹುದು ಎಂದು ಎಸ್.ಪಿ. ಸಿಬಿ ರಿಷ್ಯಂತ್ ರವರು ಹೇಳಿದರು ಅವರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಮಾನವ ಕಳ್ಳ ಸಾಗಾಣಿಕೆಯ ಕುರಿತಾಗಿ ಪೋಲಿಸ್ ಇಲಾಖೆ ಪುತ್ತೂರು ಹಾಗೂ ಬೆಂಗಳೂರಿನ ಫ್ರೀಡಂ ಜೆಟ್( ಎನ್.ಜಿ.ಒ. ) ಭಾಗಿದಾರಿಕೆಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪುತ್ತೂರು ನಗರ ಠಾಣಾಧಿಕಾರಿಯಾದ ಮಹೇಶ್ ಪ್ರಸಾದ್ ಮಾತನಾಡುತ್ತಾ 2002 ರ ನಂತರ ಮಕ್ಕಳ ಕಳ್ಳ ಸಾಗಣೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಮಹಿಳೆಯರಿಗೆ ಶಿಕ್ಷಣ ದುರ್ಬಲ ವರ್ಗದವರ ಸಬಲೀಕರಣದಿಂದ ಈ ಅಪರಾಧಗಳಿಂದ ಮುಕ್ತಿ ಪಡೆಯಬಹುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಕೆ.ಆರ್.ಆಚಾರ್ಯ ರವರು ವಹಿಸಿದ್ದರು.
ಪ್ರಾಂಶುಪಾಲರಾದ ಶ್ರೀ ಕೆ.ಜಿ.ಕೃಷ್ಣಮೂರ್ತಿ ರವರು ಉಪಸ್ಥಿತರಿದ್ದರು.ತದನಂತರ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ನೀಡಿದರು. ನಂತರ ವಿಧ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಗರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ಸ್ವಾಗತಿಸಿ ನಗರ ಟ್ರಾಫಿಕ್ ಇನ್ಸ್ಪೆಕ್ಟರ್ ನಾಗರಾಜ್ ವಂದಿಸಿದರು ತದನಂತರ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನಿತ್ತು ಗೌರವಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.