ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಆಪ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾರಣ, ಆಪ್ ಸರ್ಕಾರ ವಾಯುಮಾಲಿನ್ಯ ನಿಯಂತ್ರಿಸಲು ನೂತನ ಯೋಜನೆಯನ್ನು ಜಾರಿಗೆ ತರಲಿದೆ.
ಪ್ರತಿನಿತ್ಯ ಸಂಚರಿಸುವ ಖಾಸಗಿ ವಾಹನಗಳಿಗೆ ಒಂದು ದಿನ ಬಿಟ್ಟು ಇನ್ನೊಂದು ದಿನ, ಅಂದರೆ ವಾರದಲ್ಲಿ ಮೂರು ದಿನ ಮಾತ್ರ ವಾಹನಗಳು ಸಂಚರಿಸಲು ಅನುಮತಿ ನೀಡಲು ನಿರ್ಧರಿಸಿದ್ದು, ಈ ನಿಯಮ ಜನವರಿ 1 ರಿಂದ ಪ್ರಾರಂಭವಾಗಲಿದೆ. ಹೊಸ ನಿಯಮದ ಪ್ರಕಾರ ಸಮ ಸಂಖ್ಯೆ ಹೊಂದಿರುವ ವಾಹನಗಳು ವಾರದಲ್ಲಿ ಮೂರು ದಿನ ಸಂಚರಿಸಿದರೆ, ಬೆಸ ಸಂಖ್ಯೆ ಹೊಂದಿರುವ ವಾಹನಗಳು ವಾರದ ಮತ್ತೊಂದು ಮೂರು ದಿನಗಳಲ್ಲಿ ಸಂಚರಿಸಬೇಕು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಾಯುಮಾಲಿನ್ಯ ನಿಯಂತ್ರಿಸುವ ಸಲುವಾಗಿ ವಾಹನ ಸಂಚಾರದಲ್ಲಿ ಬದಲಾವಣೆ, ದಕ್ಷಿಣ ದೆಹಲಿಯಲ್ಲಿರುವ ಹಳೆಯದಾದ ಕಲ್ಲಿದ್ದಲು ಆಧಾರಿತ ಬದಾರ್ಪುರ್ ಪವರ್ ಪ್ಲಾಂಟ್ನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ವಾಹನ ಸಂಚಾರಗಳ ನಿಯಮ ಹೊರ ರಾಜ್ಯಗಳ ವಾಹನಗಳಿಗೆ ಅನ್ವಯಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಎನ್ಜಿ ಹೊಂದಿರುವ ಬಸ್, ಟ್ಯಾಕ್ಸಿ, ಆಟೋಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.