ನವದೆಹಲಿ: ಅಫ್ಘಾನಿಸ್ತಾನದ ಬಗೆಗಿನ ಅಂತಾರಾಷ್ಟ್ರೀಯ ಕಾನ್ಫರೆನ್ಸ್ನಲ್ಲಿ ಭಾಗವಹಿಸುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಪಾಕಿಸ್ಥಾನಕ್ಕೆ ತೆರಳಲಿದ್ದಾರೆ.
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ಥಾನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಗೌಪ್ಯವಾಗಿ ಮಾತುಕತೆ ನಡೆಸಿದ್ದು, ಈ ಮೂಲಕ ಉಭಯ ದೇಶಗಳ ನಡುವೆ ಸ್ಥಗಿತಗೊಂಡಿದ್ದ ಮಾತುಕತೆ ಮತ್ತೆ ಪುನಾರರಂಭಗೊಂಡಂತಾಗಿದೆ.
ಈ ಬೆಳವಣಿಗೆಯ ಬಳಿಕ ಇದೀಗ ಸುಷ್ಮಾ ಪಾಕಿಸ್ಥಾನಕ್ಕೆ ತೆರಳುವುದು ಖಚಿತಗೊಂಡಿದೆ. ಕಾನ್ಫರೆನ್ಸ್ಗೆಂದು ತೆರಳುವ ಅವರು ಇಸ್ಲಾಮಾಬಾದ್ನಲ್ಲಿ ಪಾಕ್ ಸಚಿವರುಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.