ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರತಾಪ ಚಂದ್ರ ಶೆಟ್ಟಿಯವರ ಹೆಸರು
ಘೋಷಣೆಯಾಗಿದ್ದು ಕಾಂಗ್ರೆಸ್ ನಾಯಕರಾದ ಜಯಪ್ರಕಾಶ್ ಹೆಗ್ಡೆ ಮತ್ತು ಭುಜಂಗ ಶೆಟ್ಟಿಯವರು ಸೋಮವಾರ ಮಧ್ಯಾಹ್ನ ನಾಮಪತ್ರ ಸಲಿದ್ದಾರೆಂದು ತಿಳಿದುಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಮತ್ತು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೂ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರತಾಪ ಚಂದ್ರ ಶೆಟ್ಟಿಯವರು ಮೊದಲು ಕಣಕ್ಕಿಳಿಯುವುದಿಲ್ಲ ಎಂದು ಘೋಷಿಸಿದ್ದರೂ ಪಕ್ಷದ ನಾಯಕರು ಅವರಿಗೆ ಟಿಕೆಟ್ ನೀಡುತ್ತಿರುವುದನ್ನು ಭುಜಂಗ ಶೆಟ್ಟಿ ಅವರು ಬಹಿರಂಗವಾಗಿ ವಿರೋಧಿಸಿದ್ದರು. ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು ಬ್ರಹ್ಮಾವರದಲ್ಲಿ ಸಭೆ ನಡೆಸಿ ಹೆಗ್ಡೆಯವರಿಗೆ ಟಿಕೆಟ್ ನೀಡಲು ಆಗ್ರಹಿಸಿದ್ದರು. ಪ್ರತಾಪ ಚಂದ್ರ ಶೆಟ್ಟಿಯವರಿಗೆ ಟಿಕೆಟ್ ಘೋಷಣೆಯಾಗಿರುವುದರಿಂದ ಇಬ್ಬರೂ ನಾಯಕರು ಪಕ್ಷೇತರರಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಹೆಗ್ಡೆ ಮತ್ತು ಭುಜಂಗ ಶೆಟ್ಟಿ ನಾಮಪತ್ರ ಸಲ್ಲಿಸಿದರೂ ಕೊನೆ ಕ್ಷಣದಲ್ಲಿ ಒಬ್ಬರು ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ.
ಬಿಜೆಪಿಯಿಂದ ಎರಡನೇ ಅಭ್ಯರ್ಥಿ?
ಕಾಂಗ್ರೆಸ್ ಪಕ್ಷದ ಬೆಳವಣಿಗೆ ನೋಡಿ ಇದುವರೆಗೆ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದ ಬಿಜೆಪಿ ಈಗ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಎರಡೂ ಪಕ್ಷಗಳಿಗೆ ಒಂದು ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದಷ್ಟು ಮತಗಳಿವೆ. ಕಾಂಗ್ರೆಸ್ನಲ್ಲಿ ಬಂಡುಕೋರರು ಸ್ಪರ್ಧಿಸಿದರೆ ಅದರಿಂದ ಲಾಭ ಬರಬಹುದೋ ಎಂಬ ಲೆಕ್ಕಾಚಾರ ಬಿಜೆಪಿಯದು. ಆದರೆ ಇದರಿಂದ ನಷ್ಟವೂ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಬಿಜೆಪಿ ರಾಜ್ಯ ಸಮಿತಿ ಎರಡನೆಯ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಖಚಿತ ತೀರ್ಮಾನ ತಳೆದಿಲ್ಲ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.