ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತನ್ನ ಹಾಗೂ ರಾಹುಲ್ ಗಾಂಧಿ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿರುವ ಸೋನಿಯಾ ಗಾಂಧಿ, ತಾನು ಯಾವುದಕ್ಕೂ ಹೆದರುವುದಿಲ್ಲ ಎಂದಿದ್ದಾರೆ.
ಈ ಪ್ರಕರಣದಲ್ಲಿ ರಾಜಕೀಯ ಪಿತೂರಿ ಇದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಅದನ್ನು ನಿರ್ಧರಿಸುವುದು ನಿಮಗೆಯೇ ಬಿಟ್ಟದ್ದು ಎಂದಿದ್ದಾರೆ. ಅಲ್ಲದೇ ನಾನು ಇಂದಿರಾ ಗಾಂಧಿಯವರ ಸೊಸೆ, ಯಾವುದಕ್ಕೂ ಹೆದರಲಾರೆ. ನಾನ್ಯಾಕೆ ಹೆದರಬೇಕು? ಎಂದು ಪ್ರಶ್ನಿಸಿದ್ದಾರೆ.
ಇನ್ನೊಂದೆಡೆ ಪ್ರಕರಣದ ವಿಚಾರಣೆಗಾಗಿ ಡಿ.೧೯ರಂದು ಮಧ್ಯಾಹ್ನ 3 ಗಂಟೆಗೆ ಸೋನಿಯಾ ಮತ್ತು ರಾಹುಲ್ ಖುದ್ದಾಗಿ ಹಾಜರಾಗಬೇಕು ಎಂದು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.