ಬೆಂಗಳೂರು: ಲೋಕಾಯುಕ್ತ ಕಛೇರಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ 10.30ರ ಸುಮಾರಿಗೆ ರಾಜಭವನಕ್ಕೆ ತೆರಳಿ ಭಾಸ್ಕರ್ ರಾವ್ ರಾಜೀನಾಮೆ ಪತ್ರವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಇದನ್ನು ಅಂಗೀಕಾರ ಮಾಡಿದ್ದಾರೆ. ರಾವ್ ರಾಜೀನಾಮೆಯನ್ನು ಕಾನೂನು ಸಚಿವ ಬಿ.ಟಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ.
ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಲೋಕಾಯುಕ್ತದಲ್ಲಿ ನಡೆಸಿದ್ದ ಡೀಲ್ ಪ್ರಕರಣ ರಾಜಕೀಯವಾಗಿ, ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ಸಂಬಂಧ ಭಾಸ್ಕರ್ ರಾವ್ ಲೋಕಾಯುಕ್ತ ಸ್ಥಾನದಿಂದ ಕೆಳಗಿಳಿಯಬೇಕೆಂಬ ಒತ್ತಡಗಳು ಕೇಳಿ ಬಂದಿದ್ದವು. ಆದರೆ ಇದುವರೆಗೆ ರಾಜೀನಾಮೆ ನೀಡಲು ಅವರು ನಿರಾಕರಿಸುತ್ತಲೇ ಬಂದಿದ್ದರು. ಅಲ್ಲದೇ ಸುಧೀರ್ಘ ರಜೆಯ ಮೇಲೆ ಅವರು ಕಛೇರಿಯಿಂದ ದೂರವಿದ್ದರು.
ಇದೀಗ ಕೊನೆಗೂ ಒತ್ತಡಕ್ಕೆ ಮಣಿದ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.