ನವದೆಹಲಿ: ಕಳೆದ ಒಂದು ವರ್ಷದಲ್ಲಿ ಉಗ್ರರೊಂದಿಗೆ ಹೋರಾಡಿ ದೇಶದ 57 ಯೋಧರು ವೀರ ಮರಣವನ್ನಪ್ಪಿದ್ದಾರೆ ಎಂಬುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
2014ರ ಡಿ.1ರಿಂದ 2015ರ ನ.27ರವರೆಗೆ ಒಟ್ಟು 57 ಯೋಧರು ಉಗ್ರರೊಂದಿಗೆ ಹೋರಾಡುತ್ತಾ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಖಾತೆಯ ರಾಜ್ಯ ಸಚಿವ ರಾವ್ ಇಂದ್ರಜಿತ್ ಸಿಂಗ್ ರಾಜ್ಯಸಭಾಗೆ ಲಿಖಿತ ಮಾಹಿತಿ ನೀಡಿದ್ದಾರೆ.
ಈ ವರ್ಷದ ಜೂನ್ 1ರಿಂದ ನ.27ರವರೆಗೆ ಒಟ್ಟು 38 ಮಂದಿ ಹುತಾತ್ಮರಾಗಿದ್ದಾರೆ. ಅಲ್ಲದೇ ಜ.1ರಿಂದ ನ.30ರವರೆಗೆ ಒಟ್ಟು ವಾಸ್ತಾವ ಗಡಿ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ 151 ಕದನ ವಿರಾಮ ಉಲ್ಲಂಘನೆಗಳಾಗಿವೆ ಎಂದಿದ್ದಾರೆ.
ಬಿಎಸ್ಎಫ್ ನಿಯಂತ್ರಣದಲ್ಲಿರುವ ಐಬಿ ಪ್ರದೇಶದಲ್ಲಿ ಜ.1ರಿಂದ ಅ.31ರವೆಗೆ ಒಟ್ಟು 249 ಕದನವಿರಾಮ ಉಲ್ಲಂಘನೆಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.