ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ.ವಸ್ತುಪ್ರದರ್ಶನದಲ್ಲಿ 195 ಮಳಿಗೆಗಳಿದ್ದು ಬೆಳಿಗ್ಗೆ ಗಂಟೆ 9 ರಿಂದ ರಾತ್ರಿ 10 ರ ವರೆಗೆ ಉಚಿತ ಪ್ರವೇಶಾವಕಾಶವಿದೆ.
ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗವಾಗಿ ಶುಚಿರ್ಭೂತರಾದರೆ ಬಳಿಕ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಅಂತರಂಗವಾಗಿ ಶಾಂತಿ, ನೆಮ್ಮದಿ ಪಡೆಯುತ್ತಾರೆ. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆಯುತ್ತಾರೆ.
ರತ್ನಗಿರಿ (ಬಾಹುಬಲಿ ಬೆಟ್ಟ), ಲಲಿತೋದ್ಯಾನ, ಮಂಜೂಷಾ ವಸ್ತು ಸಂಗ್ರಹಾಲಯ, ವಿಂಟೇಜ್ ಕಾರುಗಳ ಮ್ಯೂಸಿಯಂ, ನೆಲ್ಯಾಡಿ ಬೀಡು, ಚಂದ್ರನಾಥ ಸ್ವಾಮಿ ಬಸದಿ, ವಸಂತ ಮಹಲ್, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.