ಕೊಕ್ರಜಾರ್: ಅಸ್ಸಾಂನ ಕೊಕ್ರಜಾರ್ ಮತ್ತು ಉದಲ್ಗುರಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಕ್ಷಣಾ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 8 ಶಂಕಿತ ಉಗ್ರವಾದಿಗಳು ಮತ್ತು ದಂಗೆಕೋರರೊಂದಿಗೆ ಸಂಪರ್ಕ ಹೊಂದಿರುವವನ ಬಂಧನವಾಗಿದೆ,
ಇವರಲ್ಲಿ ಏಳು ಬಂಧಿತರು ಬಂಡುಕೋರ ಸಂಘಟನೆಗಳಾದ ಎನ್ಡಿಎಫ್ಬಿ, ಎನ್ಎಸ್ಸಿಎನ್, ಎನ್ಎಲ್ಎಫ್ಬಿ ಸಂಘಟಯ ಸದಸ್ಯರು. ಇವರನ್ನು ಬುಧವಾರ ರಾತ್ರಿ ಬಂಧನಕ್ಕೊಳಪಡಿಸಲಾಗಿದೆ. ಮತ್ತೋರ್ವ ಇವರ ಮಧ್ಯವರ್ತಿಯಾಗಿದ್ದವನು ಎನ್ನಲಾಗಿದೆ. ಇವರಿಂದ 7.65 ಎಂಎಂ ಪಿಸ್ತೂಲ್, ಎರಡು ಮ್ಯಾಗಜೀನ್, 50 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ,
ಬಂಡುಕೋರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದ್ದು, ಗುರುವಾರ ಗೊರೋಯ್ಬರಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅಸ್ಸಾಂನಲ್ಲಿ ಈ ಬಂಡುಕೋರ ಉಗ್ರರ ಉಪಟಳ ಹೆಚ್ಚಾಗುತ್ತಿದ್ದು, ಅವುಗಳನ್ನು ಹತ್ತಿಕ್ಕಲು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.