ನವದೆಹಲಿ: ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನವನ್ನು ತೊರೆದು, ಪಂಜಾಬ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.
ಟೆಲಿಗ್ರಾಫ್ ಪತ್ರಿಕೆ ಈ ಬಗ್ಗೆ ವರದಿಯನ್ನು ಪ್ರಕಟಿಸಿದ್ದು, ಪಂಜಾಬ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನವನ್ನು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನೀಡಲು ಮುಂದಾಗಿದ್ದಾರೆ ಎಂದಿದೆ.
ಆದರೆ ಈ ವರದಿಯನ್ನು ಎಎಪಿ ನಾಯಕ ಅಶುತೋಷ್ ಅಲ್ಲಗೆಳೆದಿದ್ದು, ಮಾಧ್ಯಮಗಳು ದೆಹಲಿ ಸಿಎಂ ಬಗ್ಗೆ ಆಧಾರ ರಹಿತ ವರದಿಗಳನ್ನು ಪ್ರಕಟಿಸುತ್ತಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಎಷ್ಟು ಭಯಭೀತಗೊಂಡಿದೆ, ಪಂಜಾಬ್ನಲ್ಲಿ ಎಎಪಿ ಎಷ್ಟು ಬಲಿಷ್ಠವಾಗಿದೆ ಎಂಬುದನ್ನು ಇದು ತೋರಿಸುತ್ತದೆ ಎಂದಿದ್ದಾರೆ.
2017ರಲ್ಲಿ ಪಂಜಾಬ್ ಚುನಾವಣೆ ಎದುರಿಸಲಿದೆ. ಈ ಚುನಾವಣೆಯಲ್ಲಿ ಎಎಪಿಗೆ ಅಭೂತಪೂರ್ವ ಯಶಸ್ಸು ಸಿಕ್ಕರೆ ಅದರಲ್ಲಿ ಅಚ್ಚರಿಯಿಲ್ಲ ಎಂದು ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.