ನವದೆಹಲಿ: ರಾಜ್ಯಸಭೆಯ ನಾಲ್ಕನೇ ದಿನದ ಕಲಾಪವೂ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಬಲಿಯಾಗಿದೆ.
ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಭಟನೆ ನಡೆಸಲು ಆರಂಭಿಸಿದ ಕಾಂಗ್ರೆಸ್ ಸದಸ್ಯರು, ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ. ಮೋದಿ ಸರ್ವಾಧಿಕಾರಿ ಧೋರಣೆಯನ್ನು ಬಿಡಬೇಕು, ಹಿಟ್ಲರ್ನಂತಹ ವರ್ತನೆ ಭಾರತದಲ್ಲಿ ನಡೆಯುವುದಿಲ್ಲ ಎಂದು ಚಿರಾಟ ನಡೆಸಿದ್ದಾರೆ.
ಉಪ ಸಭಾಪತಿ ಪಿ.ಜೆ.ಕುರಿಯನ್ ಅವರ ಎಚ್ಚರಿಕೆಯನ್ನೂ ಧಿಕ್ಕರಿಸಿ ಕಾಂಗ್ರೆಸ್ನ ಭಾಸ್ಕರ್ ರಪೊಲು ಸದನದ ಬಾವಿಗಿಳಿದು ಚೀರಾಡಲು ಆರಂಭಿಸಿದ್ದಾರೆ.
ಕಾಂಗ್ರೆಸ್ ವರ್ತನೆಯನ್ನು ಖಂಡಿಸಿದ ಬಿಜೆಪಿ ಸದಸ್ಯ ಮುಕ್ತಾರ್ ಅಬ್ಬಾಸ್ ನಖ್ವಿ, ’ಝೂನಲ್ಲಿ ಕೇಳಿಸುವ ಹಾಗೇ ಚೀರಾಟ ಕೇಳುತ್ತಿದೆ. ಕಳೆದ ನಾಲ್ಕು ದಿನದಿಂದ ಕೂಗಿ ಕೂಗಿ ಅವರ ಗಂಟಲು ಕೆಟ್ಟಿದೆ. ಮೊದಲು ಘೋಷಣೆ ಕೂಗುತ್ತಿದವರು ಈಗ ಹೋ ಹೋ ಎಂದು ಅರಚುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.