ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಜನ್ಮದಿನದ ಅಂಗವಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ‘Speeches of the President – Vol.III’ ಮತ್ತು ‘Presidential Retreats’ ಎಂಬ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ, ಪ್ರಣವ್ ಅವರ ಭಾಷಣಗಳ ಸಂಗ್ರಹವುಳ್ಳ ಈ ಪುಸ್ತಕವನ್ನು ಪ್ರಧಾನಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಪ್ರಣವ್ ಮುಖರ್ಜಿಯವರು ತಮ್ಮ ರಾಜಕೀಯ ಜೀವನದಲ್ಲಿ ಏರಿದ ಉನ್ನತ ಸ್ಥಾನಗಳ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಪೂರೈಸಿದ್ದಾರೆ, ಪ್ರಧಾನಿಯಾಗಿ ಅವರೊಂದಿಗೆ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಣ್ಣಿಸಿದರು.
ಎರಡೂ ಪುಸ್ತಕಗಳನ್ನು ಸ್ಭುತವಾಗಿ ಬರೆಯಲಾಗಿದ್ದು, ರಾಷ್ಟ್ರಪತಿಗಳ ಚೂಪು ಮತ್ತು ಗ್ರಹಿಕಾ ಕೌಶಲ್ಯದ ಒಳನೋಟವನ್ನು ಪರಿಚಯಿಸಿಕೊಡುತ್ತದೆ ಎಂದರು.
ಪ್ರಣವ್ ಮುಖರ್ಜಿಯವರು ಡಿ.11ರಂದು 80 ವಸಂತಗಳನ್ನು ಪೂರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.