ನವದೆಹಲಿ: ಕಿಂಗ್ ಫಿಶರ್ ಏರ್ಲೈನ್ಸ್ ವಿಫಲವಾಗುವುದಕ್ಕೆ ಯುಪಿಎ ಸರ್ಕಾರವೇ ಕಾರಣ ಎಂದು ಉದ್ಯಮಿ ವಿಜಯ್ ಮಲ್ಯ ಆರೋಪಿಸಿದ್ದಾರೆ.
ರಾಷ್ಟ್ರೀಯ ವಿಮಾನ ಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಜೆಟ್ ಏರ್ವೇಸ್ಗೆ ಯುಪಿಎ ಸರ್ಕಾರ ಹೆಚ್ಚಿನ ಪ್ರಯೋಜನ ಮಾಡಿಕೊಟ್ಟ ಹಿನ್ನಲೆಯಲ್ಲಿ ಕಿಂಗ್ ಫಿಶರ್ ಏರ್ಲೈನ್ಸ್ ನಷ್ಟ ಅನುಭವಿಸಿತು ಎಂದು ಮಲ್ಯ ಆರೋಪಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ ಈ ಬಗ್ಗೆ ಮಾಜಿ ಸಚಿವ ಪಿ.ಚಿದಂಬಂರ ಅವರ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಇಂಧನಗಳ ದಿಢೀರ್ ಬೆಲೆ ಏರಿಕೆ ಕೂಡ ನಷ್ಟಕ್ಕೆ ಕಾರಣವಾಯಿತು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ಐಡಿಬಿಐ ಬ್ಯಾಂಕಿನಿಂದ ೯೦೦ ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಅವರನ್ನು ಗುರುವಾರ ಸಿಬಿಐ ವಿಚಾರಣೆಗೊಳಪಡಿಸಿತ್ತು. ಬ್ಯಾಂಕ್ನೊಂದಿಗೆ ಈ ವಿಷಯವನ್ನು ಸೆಟಲ್ ಮಾಡಿಕೊಳ್ಳುವ ಭರವಸೆಯನ್ನು ಮಲ್ಯ ಈ ವೇಳೆ ತನಿಖಾಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.