ನವದೆಹಲಿ: ಸಮ ಮತ್ತು ಬೆಸ ವಾಹನ ಸಂಚಾರ ನಿಯಮ ಜಾರಿಗೊಳಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ದೆಹಲಿ ಸರ್ಕಾರ ಇದೀಗ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಶಾಲೆಗಳನ್ನು ಮುಚ್ಚುಲು ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ದೆಹಲಿ ಸರ್ಕಾರವು ಜ.1ರಿಂದ 15ರ ವರೆಗೆ ಶಾಲೆಗಳನ್ನು ಮುಚ್ಚವಂತೆ ಪ್ರಸ್ತಾಪ ಪಡೆದಿದೆ. ಸಮ-ಬೆಸ ನಿಯಮ ಜಾರಿಗೊಳಿಸುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಉಂಟಾಗದಂತೆ ದೆಹಲಿಯಾದ್ಯಂತ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಸರ್ಕಾರ ಘೋಷಿಸಲಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಡಿಸೆಂಬರ್ ಕೊನೆಯ ವಾರದಿಂದ ಜನವರಿ ಮೊದಲ ವಾರದಲ್ಲಿ ಚಳಿಗಾಲದ ರಜೆ ನೀಡಲಾಗುತ್ತದೆ. ಒಂದು ವೇಳೆ ಶಿಕ್ಷಣ ಇಲಾಖೆಯು ಈ ರಜೆಯನ್ನು ಜ.1ರಿಂದ ಜ.15ರ ತನಕ ನೀಡಲು ಒಪ್ಪಿಕೊಂಡಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಅಡ್ಡಿ ಉಂಟಾಗದು ಎಂದು ಹೇಳಲಾಗಿದೆ.
ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಚಿವ ಸಂಪುಟ, ಸಂಬಂಧಿತ ಇಲಾಖೆಗಳು ಮತ್ತು ಸಂಸ್ಥೆಗಳ ಸದಸ್ಯರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.