ದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಆರೋಪಿ, ಭಾರತಕ್ಕೆ ಅತೀವವಾಗಿ ಬೇಕಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ವಾಪಾಸ್ ಕರೆತರುತ್ತೇವೆ ಎಂದು ಸಿಬಿಐನ ನಿರ್ದೇಶಕ ಅನಿಲ್ ಸಿನ್ಹಾ ಭರವಸೆ ನೀಡಿದ್ದಾರೆ.
ಮಾಧ್ಯಮವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿನ್ಹಾ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಮ್ಮ ಸಂಸ್ಥೆ ಈ ನಿಟ್ಟಿನಲ್ಲಿ ಶ್ರಮವಹಿಸುತ್ತಿದ್ದು, ಶೀಘ್ರದಲ್ಲೇ ಸಕಾರತ್ಮಕ ಫಲಿತಾಂಶ ಸಿಗುವ ವಿಶ್ವಾಸದಲ್ಲಿದ್ದೇವೆ ಎಂದಿದ್ದಾರೆ.
ಇತ್ತೀಚಿಗೆ ಇಂಡೋನೇಷ್ಯಾದಲ್ಲಿ ಬಂಧೀತನಾಗಿ ಇದೀಗ ಭಾರತದ ವಶದಲ್ಲಿರುವ ಛೋಟಾ ರಾಜನ್ ಶರಣಾಗತನಾಗಿದ್ದಲ್ಲ, ಭಾರತೀಯ ಆಡಳಿತವೇ ಆತನನ್ನು ಬಂಧಿಸಿದ್ದು, ಆತ ಎಲ್ಲಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಆರು ತಿಂಗಳು ಬೇಕಾಯಿತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.