ಜೈಪುರ: ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿಂದೂ ಮಹಾಸಭಾದ ಮುಖಂಡ ಕಮಲೇಶ್ ತಿವಾರಿ ವಿರುದ್ಧ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದ ವೇಳೆ, ಮುಸ್ಲಿಂ ಸಮುದಾಯದ ಕೆಲವರು ಇಸಿಸ್ ಸಂಘಟನೆ ಮತ್ತು ಪಾಕಿಸ್ಥಾನದ ಪರವಾದ ಘೋಷಣೆಗಳನ್ನು ಕೂಗಿದ್ದಾರೆ.
ಮಲ್ಪುರ ನಗರದ ಮಸೀದಿಯೊಂದರಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಗಿದೆ, ನಗರವನ್ನು ದಾಟಿ ಮುಂದೆ ಹೋಗುತ್ತಿದ್ದಂತೆ ಕೆಲವರು ಪಾಕ್ ಮತ್ತು ಇಸಿಸ್ ಪರ ಘೋಷಣೆಗಳನ್ನು ಕೂಗಿದ್ದಾರೆ.
ಇದಕ್ಕೆ ಸಂಬಂಧಿಸಿದ ವೀಡಿಯೋಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಐದು ಮಂದಿಯನ್ನು ಬಂಧಿಸಲಾಗಿದೆ. ಇಸಿಸ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಇವರು ಕೂಗಿದ್ದಾರೆ ಎನ್ನಲಾಗಿದೆ.
ತಿವಾರಿಗೆ ಮರಣದಂಡನೆ ನೀಡಬೇಕೆಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ಲಕ್ಷಾಂತರ ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.