ತಿರುವನಂತಪುರಂ: ಕಾಂಗ್ರೆಸ್ ಮುಖಂಡ ಎಸ್.ಶಂಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಗೆ ಆಹ್ವಾನ ನೀಡದೇ ಇರುವ ವಿಷಯ ಇಂದು ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಕೊಲ್ಲಂನಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರೂ ಆಗಮಿಸುತ್ತಿದ್ದಾರೆ.
ಉಮ್ಮನ್ ಚಾಂಡಿಗೆ ಆಹ್ವಾನ ನಿರಾಕರಿಸಲು ಬಿಜೆಪಿ ಮತ್ತು ಪ್ರಧಾನಿಯೇ ಕಾರಣ ಎಂದು ರಾಹುಲ್ ಗಾಂಧಿ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ನೇರ ಆರೋಪ ಮಾಡುತ್ತಿದ್ದಾರೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ಯಕ್ರಮವನ್ನು ಆಯೋಜಿಸಿರುವ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ(ಎಸ್ಎನ್ಡಿಪಿ) ಮುಖ್ಯಸ್ಥ ವೆಲ್ಲಪಳ್ಳಿ ನಟೇಸನ್, ಚಾಂಡಿಗೆ ಆಹ್ವಾನ ನೀಡದಕ್ಕೆ ನಾನು ಕಾರಣವೇ ಹೊರತು ಬಿಜೆಪಿಯಲ್ಲ, ಯಾವುದೇ ಬಿಜೆಪಿ ನಾಯಕರು ಈ ಬಗ್ಗೆ ನಮ್ಮ ಮೇಲೆ ಒತ್ತಡ ತಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ ಕೊಲ್ಲಂನಲ್ಲಿ ಚಾಂಡಿ ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ, ಈ ವೇಳೆ ಅವರು ತನ್ನನ್ನು ಕಾರ್ಯಕ್ರಮದಿಂದ ದೂರವಿಟ್ಟ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ.
ಅಲ್ಲದೇ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಶಂಕರ್ ಪ್ರತಿಮೆಯ ಮುಂದೆ ಪ್ರಾರ್ಥನೆಯನ್ನು ಸಲ್ಲಿಸಲು ಮುಂದಾಗಿದ್ದಾರೆ.
ಹಿಂದುಳಿದ ಇಝವ ಕಮ್ಯೂನಿಟಿಯ ಎಸ್ಎನ್ಡಿಪಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.