News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 27th November 2024


×
Home About Us Advertise With s Contact Us

ಮಡೆಸ್ನಾನ ವಿರೋಧಿಸಿ ಪ್ರತಿಭಟನೆ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಮಡೆ ಮಡೆಸ್ನಾನವನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ದಲಿತ ಹಕ್ಕುಗಳ ಸಮಿತಿ ಹಾಗೂ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

14dlPRATHIBATANE

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಸಮಿತಿಯ ಮುಖಂಡ ಶೇಖರ ಎಲ್. ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿಯೂ ಶೋಷಿತ ಜನರನ್ನು ಮಡೆ ಮಡೆಸ್ನಾನದ ನೆಪದಲ್ಲಿ ಮೂಢನಂಬಿಕೆಗಳತ್ತ ತಳ್ಳುವ ಪ್ರಯತ್ನಗಳು ನಡೆಯುತ್ತಿದೆ. ಇಂತಹ ಆಚರಣೆಗೆ ಸರಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇದನ್ನು ನಿಷೇಧಿಸಲು ಅವಕಾಶವಿದ್ದು ಕೂಡಲೇ ಮಡೆ ಮಡೆಸ್ನಾನ ನಿಲ್ಲಿಸಬೇಕು ಹಾಗೂ ಮೂಢನಂಬಿಕೆ ತಡೆ ಕಾಯ್ದೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ವಸಂತ ನಡ, ಕಾರ್ಯದರ್ಶಿ ವಿಠಲ ಮಲೆಕುಡಿಯ, ಜಯಾನಂದ ಸವಣಾಲು, ಚಣಿಯಪ್ಪ ಧರ್ಮಸ್ಥಳ, ದಲಿತ ಹಕ್ಕುಗಳ ಸಮಿತಿಯ ಬಾಬು ಕೊಯ್ಯೂರು, ಈಶ್ವರಿ, ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್, ಮುಖಂಡರುಗಳಾದ ಜಯರಾಮ ಮಯ್ಯ, ಡೊಂಬಯ್ಯ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಮಡೆ ಮಡಸ್ನಾನ ನಿಷೇಧಿಸಬೇಕು, ಮೂಢ ನಂಬಿಕೆ ನಿಷೇಧ ಕಾಯ್ದೆ ಜಾರಿಗೆ ತರಬೇಕು, ಪಂಕ್ತಿ ಭೇದ ನಿಷೇಧಿಸಬೇಕು ಮುಂತಾದ ಬೇಡಿಕೆಗಳಿರುವ ಮನವಿಯನ್ನು ತಹಶೀಲ್ದಾರರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top