ಮಂಗಳೂರು: ಬಂಟರ ಸಂಘ ಸುರತ್ಕಲ್ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ಡಿಸೆಂಬರ್ 20 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಸುರತ್ಕಲ್‌ನ ಗೋವಿಂದ ದಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ಜರಗಲಿದೆ. ಕ್ರೀಡಾಕೂಟವನ್ನು ಎಂಆರ್‌ಪಿಎಲ್-ಡಿಪಿಎಸ್ ಶಾಲೆಯ ದೈಹಿಕ ಶಿಕ್ಷಕ ಗೌತಮ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಹ ಸಂಚಾಲಕ ಉಮೇಶ್ ರೈ, ಡಾ.ಪಿ.ಕೆ. ಹೆಗ್ಡೆ, ಉದ್ಯಮಿಗಳಾದ ಜಯ ಶೆಟ್ಟಿ ಮತ್ತು ಚಂದ್ರಶೇಖರ ಶೆಟ್ಟಿ ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ವಾಲಿಬಾಲ್, ಉದ್ದ ಜಿಗಿತ, ಗುಂಡು ಎಸೆತ, ವೇಗ ನಡಿಗೆ, ಓಟ ಸ್ಪರ್ಧೆ ನಡೆಯಲಿದೆ. ವಯೋಮಿತಿ ಆಧಾರದಲ್ಲಿ ಕ್ರೀಡೆಗಳು ಜರಗಲಿದೆ. ಸುರತ್ಕಲ್ ಬಂಟರ ಸಂಘದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಕ್ರೀಡಾ ಕೂಟಕ್ಕೆ ಆಹ್ವಾನಿಸಲಾಗಿದ್ದು ಸ್ಪರ್ಧೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗ್ರಾಮಕ್ಕೆ ಚಾಂಪಿಯನ್ ಟ್ರೋಫಿ ನೀಡಲಾಗುವುದು ಎಂದು ಕ್ರೀಡಾ ಕಾರ್ಯದರ್ಶಿ ದೇವೆಂದ್ರ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448149170 ಸಂಪರ್ಕಿಬಹುದಾಗಿದೆ.
ಅಭಿನಂದನಾ ಸಮಾರಂಭ
ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿರತಣೆ ಹಾಗೂ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ ಡಿಸೆಂಬರ್ 25 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಬಂಟರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ, ಸಾಂತ, ಕಾವೂರು ಬಂಟರ ಸಂಘದ ಅಧ್ಯಕ್ಷ ಎಂ.ಎಸ್. ಶೆಟ್ಟಿ, ಉದ್ಯಮಿ ಸಂತೋಷ್ ಶೆಟ್ಟಿ ಭಾಗವಹಿಸಲಿದ್ದಾರೆ. ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ. ಸಂತೋಷ್ ಐತಾಳ್, ಉರ್ಬಾನ್ ಪಿಂಟೋ, ಲೋಕೇಶ್ ಸುರತ್ಕಲ್ ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಸೀತಾರಾಮ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.