ಕೊಲ್ಲಂ: ದೇಶದ ಬಗ್ಗೆ ಕಾಳಜಿ ಇಲ್ಲದವರು ಚಳಿಗಾಲದ ಸಂಸತ್ ಅಧಿವೇಶನಕ್ಕೆ ಅಡ್ಡಿ ಉಂಟುಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಟೀಕಿಸದ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷವು ಕಲಾಪವನ್ನು ಹಾಳು ಕೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್, ಸಂಸತ್ ಅಧಿವೇಶನಕ್ಕೆ ತಡೆಯೊಡ್ಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತವರು ನಾವು ಸಂಸತ್ತನ್ನು ನಡೆಯಲು ಬಿಡೆವು ಎಂಬಂತೆ ವರ್ತಿಸುತ್ತಿದ್ದಾರೆ. ದೇಶಕ್ಕೆ ಏನು ಬೇಕಾದರೂ ಆಗಲಿ ಎಂದು ಕೆಲವರು ನಿರ್ಧರಿಸಿದಂತಿದೆ ಎಂದು ಮೋದಿ ಕೊಲ್ಲಂನಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ದೇಶವು ಸಾರ್ವಜನಿಕ ಸಮಸ್ಯೆಗಳನ್ನು ಚರ್ಚಿಸಲು ಶಾಸನ ಮತ್ತು ಐತಿಹಾಸಿಕ ಸಂವಿಧಾನ ತಿದ್ದುಪಡಿ ಮೂಲಕ ಜಿಎಸ್ಟಿ ಅನುಮೋದಿಸಲು ಸಂಸತ್ತು ಕಾಯುತ್ತಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದರು.
ಸಂಸತ್ತಿನ ಚಳಿಗಾಲದ ಅಧಿವೇಶನವು ಡಿ.23ರಂದು ಮುಗಿಯಲಿದೆ. ಅಷ್ಟರೊಳಗೆ ದೇಶದ ಆರ್ಥಿಕಾಭಿವೃದ್ಧಿಗೆ ಅತೀ ಅಗತ್ಯವಾಗಿ ಜಿಎಸ್ಟಿ ಮಸೂದೆ ಉಭಯ ಸದನಗಳಲ್ಲಿ ಅನುಮೋದನೆ ಆಗಬೇಕಿದೆ. ಆದರೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ನ್ಯಾಷನಲ್ ಹೆರಾಲ್ಡ್ ಮತ್ತಿತರ ವಿಷಯಗಳನ್ನು ಮುಂದಿಟ್ಟು ಸಂಸತ್ತಿನ ಎರಡೂ ಸದನಗಳಲ್ಲಿ ಜಿಎಸ್ಟಿ ಮಸೂದೆ ಜಾರಿಗೊಳಿಸಲು ಬಿಡುತ್ತಿಲ್ಲ. ಜಿಎಸ್ಟಿ ಮಸೂದೆ ಜಾರಿಗೊಳಿಸುವುದು ಸಂದೇಹವೆನಿಸಿದೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.