ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ನಟಿಸುತ್ತಿರುವ ‘ಉತ್ತಮ ವಿಲನ್’ ಹಿಂದೂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದೆ. ವಿಶೇಷವೆಂದರೆ ಈ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳೂ ಕೂಡ ಸಾಥ್ ನೀಡಿವೆ. ಅಲ್ಲವೇ ಪದೇ ಪದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿರುವ ಕಮಲ್ ಹಾಸನ್ ವಿರುದ್ಧ ದೂರನ್ನೂ ದಾಖಲಿಸಿದೆ.
‘ತನ್ನ ಹಿಂದಿನ ವಿಶ್ವರೂಪಂ ಸಿನೆಮಾದಲ್ಲಿ ಕಮಲ್ಹಾಸನ್ ಅವರು ಮುಸ್ಲಿಂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದರು, ಇದೀಗ ಅವರು ‘ಉತ್ತಮವಿಲನ್’ ಸಿನೆಮಾದ ಮೂಲಕ ಹಿಂದೂಗಳ ಭಾವನೆಗೆ ನೋವುಂಟು ಮಾಡುತ್ತಿದ್ದಾರೆ’ ಎಂದು ಆರೋಪಿಸಿರುವ ಇಂಡಿಯನ್ ನ್ಯಾಷನಲ್ ಲೀಗ್ ಕಾರ್ಯದರ್ಶಿ ಎಂ.ನಝೀರ್ ಅಹ್ಮದ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಅಲ್ಲದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ವಿವಾದಗಳ ಮೂಲಕ, ಧಾರ್ಮಿಕ ಭಾವನೆಗಳಿಗೆ ನೋವುಂಟ ಮಾಡುವ ಮೂಲಕ ಕಮಲ್ ಹಾಸನ್ ಅವರು ಕೀಳುಮಟ್ಟದ ಪ್ರಚಾರ ಪಡೆಯಲು ಬಯಸುತ್ತಿದ್ದಾರೆ, ಅವರ ವಿರುದ್ಧ ಕಠಿಣಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉತ್ತಮವಿಲನ್ ಸಿನಿಮಾಗೆ ನಿಷೇಧ ಹೇರಬೇಕು ಎಂದು ವಿಎಚ್ಪಿ ಆಗ್ರಹಿಸಿದೆ, ಈ ಸಿನೆಮಾದಲ್ಲಿ ಭಗವಾನ್ ವಿಷ್ಣುವನ್ನು ಟೀಕಿಸಲಾಗಿದೆ ಎಂದು ಹೇಳಲಾಗಿದೆ. ಮೇ 1ರಂದು ಇದು ಬಿಡುಗಡೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.