ಮುಂಬಯಿ: ನಟ ಶಾರುಖ್ ಖಾನ್ ಅಭಿನಯದ ಚಿತ್ರ ದಿಲ್ವಾಲೇ ವಿರುದ್ಧ ದೇಶಸ ವಿವಿಧೆಡೆ ಭಾರೀ ಪ್ರತಿಭಟನೆಗಳು ನಡೆಯುತ್ತಿದೆ, ಈ ಚಿತ್ರವನ್ನು ವೀಕ್ಷಿಸಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪರ, ವಿರೋಧ ಚರ್ಚೆಗಳೂ ನಡೆಯುತ್ತಿದೆ.
ದೇಶದಲ್ಲಿ ಅಸಹಿಷ್ಣುತೆ ಇದೆ ಎನ್ನುವ ಮೂಲಕ ಭಾರತದ ಗೌರವಕ್ಕೆ ಧಕ್ಕೆ ತಂದ ಶಾರುಖ್ ಅವರ ಚಿತ್ರಗಳನ್ನು ಯಾವುದೇ ಕಾರಣಕ್ಕೂ ಪ್ರದರ್ಶಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಜಬಲ್ಪುರದಲ್ಲಿ ಪ್ರದರ್ಶನ ರದ್ದುಗೊಂಡಿದೆ.
ಈ ಚಿತ್ರದಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ ಆದರೂ ಅದರ ಹೀರೋ ನೀಡಿದ ಹೇಳಿಕೆಯಿಂದಾಗಿ ಚಿತ್ರವೂ ಆಕ್ರೋಶಕ್ಕೆ ತುತ್ತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.