ನವದೆಹಲಿ: ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣದ ಬಾಲಪರಾಧಿಯ ಬಿಡುಗಡೆಯನ್ನು ವಿರೋಧಿಸಿದ ಆಕೆಯ ಪೋಷಕರು ಮತ್ತು ಕೆಲವೊಂದು ಎನ್ಜಿಓಗಳ ಸದಸ್ಯರುಗಳು ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರೆದಿದೆ.
ಬಾಲಪರಾಧಿಯನ್ನು ಬಾಲ ಗೃಹದಿಂದ ಬಿಡುಗಡೆಗೊಳಿಸಲಾಗಿದ್ದರೂ ದೆಹಲಿಯಲ್ಲಿನ ಎನ್ಜಿಓವೊಂದರ ಸುಪರ್ದಿಗೆ ನೀಡಲಾಗಿದೆ.
ಆತನನ್ನು ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು ಎಂದು ಕೋರಿ ನಿರ್ಭಯಾ ಪೋಷಕರು ಸೇರಿದಂತೆ ಹಲವಾರು ಮಂದಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಜೆ ಪ್ರತಿಭಟನಾಕಾರರು ರಾಜ್ಪಥ್ನಲ್ಲಿ ರಸ್ತೆ ತಡೆಯನ್ನೂ ನಡೆಸಿದ್ದರು. ಕೇಂದ್ರ ಮತ್ತು ದೆಹಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು, ಹೀಗಾಗಿ ಪೊಲೀಸರು ಇವರನ್ನು ಕೆಲಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು.
ಇದೀಗ ನಿರ್ಭಯಾ ಪೋಷಕರು ಇಂದೂ ತಮ್ಮ ಮಗಳ ಸಾವಿಗೆ ನ್ಯಾಯ ಒದಿಸುವಂತೆ ಕೋರಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.