ನವದೆಹಲಿ: ರಾಜ್ಯಸಭೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಧಿವೇಶನದ ಹಲವು ಮಸೂದೆಗಳ ಮಂಡನೆಗೆ ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಸೋಮವಾರದಿಂದ ಅಧಿವೇಶನ ಸರಾಗವಾಗಿ ಸಾಗುವ ವಿಶ್ವಾಸವಿದೆ. ಲೋಕಸಭೆ ಅಧಿವೇಶನವು ಉತ್ತಮವಾಗಿ ನಡೆಯುತ್ತಿದ್ದು, ರಾಜ್ಯಸಭೆ ಅಧಿವೇಶನ ಕೂಡ ಕ್ರಮವಾಗಿ ನಡೆಯುವ ಭರವಸೆ ಇದೆ. ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳಿಂದ ಹಲವು ಮಸೂದೆಗಳ ಅನುಮೋದನೆಗೆ ಬೆಂಬಲ ವ್ಯಕ್ತವಾಗಿದೆ. ಈ ಮಸೂದೆಗಳನ್ನು ಜಾರಿಗೆ ತರುವ ಭರವಸೆ ಇದೆ ಎಂದು ನಾಯ್ಡು ತಿಳಿಸಿದ್ದಾರೆ.
ವಿಪಕ್ಷಗಳು ಜಿಎಸ್ಟಿ, ರಿಯಲ್ ಎಸ್ಟೇಟ್ ಮತ್ತಿತರ ಬಿಲ್ಗಳ ಅನುಮೋದನೆಗೆ ಬೆಂಬಲಿಸಿದಲ್ಲಿ ದೇಶಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಮಸೂದೆಯ ಕುರಿತು ಯಾವುದೇ ಅಕ್ಷೇಪಗಳಿದ್ದಲ್ಲಿ ಸಂಸತ್ತಿನಲ್ಲಿ ಚರ್ಚಿಸಬೇಕೇ ಹೊರತು ಸಂಸತ್ ಕಲಾಪಕ್ಕೆ ಅಡ್ಡಿ ಉಂಟುಮಾಡಬಾರದು ಎಂದು ಆಶಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪ್ರಸ್ತಾಪಿಸಲಾಗಿದ್ದ ಹಲವು ಮಸೂದೆಗಳು ಬಾಕಿ ಉಳಿದಿದ್ದು, ಇದರ ಅನುಮೋದನೆಗೆ ಕಾಂಗ್ರೆಸ್ ಬೆಂಬಲಿಸಬೇಕಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.