ನವದೆಹಲಿ: ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿಯ ಇತರ ಐದು ಸದಸ್ಯರ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ದೆಹಲಿ ಕ್ರಿಕೆಟ್ ಅಸೋಸಿಯೇಶನ್ ಮುಖ್ಯಸ್ಥರಾಗಿದ್ದ ವೇಳೆ ಜೇಟ್ಲಿ ಅಕ್ರಮ ಎಸಗಿದ್ದಾರೆ ಎಂದು ಎಎಪಿ ಆರೋಪಿಸಿದೆ, ಇದನ್ನು ಅಲ್ಲಗೆಳೆದಿರುವ ಜೇಟ್ಲಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ನಲ್ಲಿ ಸೋಮವಾರ ಎಎಪಿ ಮುಖಂಡರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.
ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಇಶಾಂತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯವರು ಜೇಟ್ಲಿ ಬೆಂಬಲಕ್ಕೆ ನಿಂತಿದ್ದು, ಜೇಟ್ಲಿ ನಮ್ಮ ಸಂಸ್ಥೆಯ ಮುಖಂಡರಾಗಿದ್ದುದು ನಮ್ಮ ಹೆಮ್ಮೆ. ಕ್ರೀಡೆಯನ್ನು ಉನ್ನತ ಮಟ್ಟಕ್ಕೇರಿಸುವ, ಕ್ರಿಕೆಟ್ಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವ ಗುರಿ ಅವರದ್ದಾಗಿತ್ತು ಎಂದಿದ್ದಾರೆ.
ಬಿಜೆಪಿ ಕೂಡ ಜೇಟ್ಲಿಯ ಸಹಾಯಕ್ಕೆ ಧಾವಿಸಿದೆ, ಅವರು ಯಾವುದೇ ರೀತಿಯ ಭ್ರಷ್ಟಾಚಾರವನ್ನೂ ಎಸಗಿಲ್ಲ, ಸುದ್ದಿಯಲ್ಲಿರುವ ಎಎಪಿ ಈ ಆರೋಪ ಮಾಡುತ್ತಿದೆ ಎಂದಿದೆ.
ಇನ್ನೊಂದೆಡೆ ಜೇಟ್ಲಿ ವಿರುದ್ಧ ಶೀಘ್ರದಲ್ಲೇ ಎಫ್ಐಆರ್ ದಾಖಲಿಸುವುದಾಗಿ ಎಎಪಿ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.