ಉಡುಪಿ : ಪರ್ಯಾಯ ಸಂಚಾರದಲ್ಲಿರುವ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮತ್ತು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸಮ್ಮಾನ ಜ. 4 ರಂದು ನೆರವೇರಲಿದೆ.
ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುತ್ತದೆ. ಅನಂತರ ರಾತ್ರಿ 7.30ಕ್ಕೆ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ಶ್ರೀಗಳಿಗೆ ಪೌರಸಮ್ಮಾನ ಜರಗಲಿದೆ. ಸಚಿವ ವಿನಯ ಕುಮಾರ್ ಸೊರಕೆ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷ ಯುವರಾಜ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಪುರಪ್ರವೇಶದೊಂದಿಗೆ ಪರ್ಯಾಯೋತ್ಸವದ ಸಂಭ್ರಮ ಆರಂಭಗೊಳ್ಳಲಿದೆ. ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನಗರಸಭೆ ಮೂಲ ಸೌಕರ್ಯ ಮತ್ತು ಸ್ವತ್ಛತೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ನಗರಸಭೆ ಅಧ್ಯಕ್ಷ ಯುವರಾಜ್ ತಿಳಿಸಿದರು.
ಸ್ವಾಗತ ಸಮಿತಿ ಪದಾಧಿಕಾರಿಗಳಾದ ರಾಘವೇಂದ್ರ ಆಚಾರ್ಯ, ಭುವನೇಂದ್ರ ಕಿದಿಯೂರು, ರತ್ನಕುಮಾರ್, ಪದ್ಮನಾಭ ಭಟ್, ಡಾ| ವಿಜಯೀಂದ್ರ, ದಿವಾನ್ ರಘುರಾಮ ಆಚಾರ್ಯ ಉಪಸ್ಥಿತರಿದ್ದರು. ವಾಸುದೇವ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.