ನವದೆಹಲಿ: ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿಯವರ ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಿಂತಿದ್ದಾರೆ.
ಎಲ್.ಕೆ.ಅಡ್ವಾಣಿ ಅವರು ಹವಾಲ ಆರೋಪಗಳಿಂದ ಮುಕ್ತರಾದಂತೆ ಅರುಣ್ ಜೇಟ್ಲಿಯವರು ತಮ್ಮ ಮೇಲಿನ ಆರೋಪಗಳಿಂದ ಮುಕ್ತರಾಗಲಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ವಾರದ ಸಭೆಯಲ್ಲಿ ಅವರು ಜೇಟ್ಲಿಯವರನ್ನು ಸಮರ್ಥಿಸಿಕೊಂಡರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೂ ಜೇಟ್ಲಿ ಬೆಂಬಲಕ್ಕೆ ನಿಂತಿದ್ದು, ಜೇಟ್ಲಿ ಸಿದ್ಧಾಂತವನ್ನು ಇಟ್ಟುಕೊಂಡು ಬದುಕುತ್ತಿದ್ದಾರೆ, ಇಡೀ ಬಿಜೆಪಿ ಅವರ ಬೆಂಬಲಕ್ಕಿದೆ ಎಂಬುದು ಇಡೀ ದೇಶಕ್ಕೆ ತಿಳಿದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.