ಬೆಂಗಳೂರು : ಎತ್ತಿನಹೊಳೆ ಯೋಜನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರವಾದಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಚೆನ್ನೈನ ಹಸಿರು ಪೀಠ ಜನವರಿ 8ಕ್ಕೆ ಮುಂದೂಡಿದೆ.
ಕೇಂದ್ರ ಪರಿಸರ ಇಲಾಖೆಯ ಅನುಮತಿ ಪಡೆಯದೆಯೆ ರಾಜ್ಯ ಸರ್ಕಾರ ಈ ಯೋಜನೆ ರೂಪಿಸಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರವಾದಿಗಳು ಚೆನ್ನೈನ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಸರಕಾರ ಡಿ.7 ರಂದು ಕೇಂದ್ರ ಪರಿಸರ ಇಲಾಖೆ ಅನುಮತಿ ಪಡೆದು ಕಾಮಗಾರಿ ಮುಂದುವರೆಸುವುದಾಗಿ ಹಸಿರು ಪೀಠಕ್ಕೆ ತಿಳಿಸಿತ್ತು. ಮುಂದಿನ ವಿಚಾರಣೆವರೆಗೆ ಈ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳು ನಡೆಯುವುದಿಲ್ಲ ಎಂದು ರಾಜ್ಯದ ಅಡ್ವೊಕೇಟ್ ಜನರಲ್ ಎಂ.ಆರ್. ನಾಯಕ್ ಅವರು ನ್ಯಾಯಮಂಡಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.