ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಪ್ರವಾಸಕ್ಕಾಗಿ ಬುಧವಾರ ರಷ್ಯಾಗೆ ತೆರಳಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಹಲವಾರು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆ ಇದೆ.
ಇಂದು ಸಂಜೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾಸ್ಕೋದಲ್ಲಿ ಮೋದಿಗೆ ಔತನಕೂಟವನ್ನು ಏರ್ಪಡಿಸಲಿದ್ದಾರೆ, ಬಳಿಕ ಇಬ್ಬರೂ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಕ್ಷಣೆ, ನ್ಯೂಕ್ಲಿಯರ್ ಎನರ್ಜಿಗೆ ಸಂಬಂಧಿಸಿದ ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.
ಗುರುವಾರ ಅವರು ಮಾಸ್ಕೋದ ಎಕ್ಸ್ಪೋಸೆಂಟರ್ನಲ್ಲಿ 3 ಸಾವಿರ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ, ಬಳಿಕ ಭದ್ರತೆಯ ಸಂಸತ್ ಕಮಿಟಿಯ ಸಭೆಯ ನೇತೃತ್ವವನ್ನು ವಹಿಸಲಿದ್ದಾರೆ.
ಅಂದೇ ರಾತ್ರಿ ಅವರು ಅಫ್ಘಾನಿಸ್ತಾನಕ್ಕೆ ಪ್ರಯಾಣಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.