ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಬಹಿರಂಗವಾಗಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಹಗರಣ ಕುರಿತು ಆರೋಪ ಮಾಡಿದ್ದ ಕೀರ್ತಿ ಆಜಾದ್ರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಹಾರದ ದರ್ಭಾಂಗ ಲೋಕಸಭಾ ಕ್ಷೇತ್ರದ ಸಂಸದ, ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಮಾನತುಗೊಳಿಸಿದ್ದಾರೆ.
ಡಿಡಿಸಿನಲ್ಲಿ ಅರುಣ್ ಜೇಟ್ಲಿ ಅವರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಎಎಪಿ ನಾಯಕರು ಆರೋಪ ಮಾಡಿದ್ದರು. ದೊಡ್ಡ ಭ್ರಷ್ಟಾಚಾರವನ್ನು ನಾನು ಬಯಲಿಗೆಳೆಯುತ್ತೇನೆ, ಆಡಿಯೋ ವಿಡಿಯೋಗಳ ಸಾಕ್ಷಿಗಳನ್ನು ಒದಗಿಸುತ್ತೇನೆ ಎಂದು ಕೀರ್ತಿ ಆಜಾದ್ ಎಎಪಿ ನಾಯಕರಿಗೆ ಸಾಥ್ ನೀಡಿದ್ದರು.
ಅಮಿತ್ ಶಾ ರವರು ಕೀರ್ತಿ ಆಜಾದ್ರಲ್ಲಿ ಮನವಿ ಮಾಡಿದ್ದರೂ, ತನ್ನ ನಿರ್ಧಾರವನ್ನು ಬದಲಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರಿಂದ ಅವನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೀರ್ತಿ ಆಜಾದ್, ಸತ್ಯ ನುಡಿದಿದ್ದಕ್ಕಾಗಿ ನನ್ನನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.