ಬೆಳ್ತಂಗಡಿ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಹಾಗೂ ಮುಂಡಾಜೆ ಇಲ್ಲಿಗೆ 2016-17ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 5 ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ 6 ನೇ ತರಗತಿಯಿಂದ 10 ನೇ ತರಗತಿಯವರೆಗೆ ಉಚಿತ ವಸತಿ ಸಹಿತ ಶಿಕ್ಷಣದ ಜೊತೆಗೆ ಉಚಿತ ಊಟ, ಪುಸ್ತಕ, ಸಮವಸ್ತ್ರ ಹಾಗು ಇತರ ಸೌಲಭ್ಯಗಳನ್ನು ನೀಡಲಾಗುವುದು.
ಪ್ರವೇಶ ಅರ್ಜಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಂದ ಪಡೆದು ಭರ್ತಿ ಮಾಡಿ 2016 ರ ಜ. 20 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9741360212 ನ್ನು ಸಂಪರ್ಕಿಸಬಹುದಾಗಿದೆ ಎಂದು ವಸತಿ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.