ಸುಳ್ಯ: ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಪಾರದರ್ಶಕವಾಗಿರಿಸಿ ಜನರಿಗೆ ತ್ವರಿತ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯವಾದ ಬದಲಾಣೆಯನ್ನು ತರುವುದು ಕೇಂದ್ರ ಸರ್ಕಾರದ ಗುರಿ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಅವರು ಸುಳ್ಯದ ವಕೀಲರ ಸಂಘದ ನೂತನ ಕಟ್ಟಡವನ್ನು ವೀಕ್ಷಿಸಿದ ಬಳಿಕ ಮಾತನಾಡಿದರು. ನ್ಯಾಯಾಂಗ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಭಾಗವಾಗಿ ನಡೆಯುವ ಕಂಪ್ಯೂಟರೀಕರಣದ ಪ್ರಥಮ ಹಂತ ಮುಕ್ತಾಯವಾಗಿದೆ ಎಂದ ಅವರು ನ್ಯಾಯಾಂಗ ವ್ಯವಸ್ಥೆಯ ಅಭಿವೃದ್ಧಿಗೆ 14ನೇ ಹಣಕಾಸು ಯೋಜನೆಯಡಿ ಕೇಂದ್ರ ಸರ್ಕಾರ 9749 ಕೋಟಿ ರೂ.ಗಳನ್ನು ನೀಡಿದೆ. ಇದರಿಂದ ವ್ಯವಸ್ಥೆಯನ್ನು ಆಧುನಿಕವಾಗಿ ಅಭಿವೃದ್ಧಿ ಪಡಿಸಲು ಸಾಧ್ಯವಾಗಬಹುದು. ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಜನರಲ್ಲಿ ಭಾರೀ ನಿರೀಕ್ಷೆ ಮತ್ತು ವಿಶ್ವಾಸ ಇದೆ. ಆ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ಪ್ರಯತ್ನವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಸುಳ್ಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಸರವಣನ್, ವಕೀಲರ ಸಂಘದ ಅಧ್ಯಕ್ಷ ಬಿ.ವೆಂಕಪ್ಪ ಗೌಡ, ಕಾರ್ಯದರ್ಶಿ ಹರೀಶ್ ಬೂಡುಪನ್ನೆ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಸುಳ್ಯದ ನ್ಯಾಯಾಲಯ ಸಂಕೀರ್ಣದ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆಯನ್ನು ಸದಾನಂದ ಗೌಡರು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.