ನವದೆಹಲಿ: ತಜಿಕೀಸ್ತಾನದ ಗಡಿ ಸಮೀಪದ ಉತ್ತರ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವೆಡೆ ಶುಕ್ರವಾರ ತಡರಾತ್ರಿ ಭೂಕಂಪ ಸಂಭವಿಸಿದ್ದು, ಜನರನ್ನು ಭಯಭೀತಗೊಳಿಸಿದೆ.
ದೆಹಲಿ, ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಜನರು ಭಯಗೊಂಡು ಕಟ್ಟಡಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಗಳಾಗಿಲ್ಲ. ಪಾಕಿಸ್ಥಾನದಲ್ಲಿ ಭೂಕಂಪದ ತೀವ್ರತೆ 6.9ಮತ್ತು ಅಫ್ಘಾನಿಸ್ತಾನದಲ್ಲಿ 6.2 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ.
ಅಫ್ಘಾನ್ ರಾಜಧಾನಿ ಕಾಬೂಲ್ನಿಂದ 280 ಕಿ.ಮೀ ದೂರಕ್ಕೆ, 203.5 ಕಿ.ಮೀ ಭೂಮಿಯ ಆಳದಲ್ಲಿ ಭೂಪಂಕನದ ಕೇಂದ್ರ ಬಿಂದುವಿದೆ ಎಂದು ತಜ್ಞರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.