ಮಂಗಳೂರು : ಪ್ರತಿಯೊಬ್ಬ ವ್ಯಕ್ತಿಯೊಳಗೂ ಒಂದಲ್ಲ ಒಂದು ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಗುರುತಿಸಿ ವಿಕಸಿಸುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರು ಮತ್ತು ಹೆತ್ತವರ ಮೇಲಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ತಮಗೆ ಆಸಕ್ತಿಯಿರುವ ಯಾವುದಾದರೊಮದು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಹಾಗಾದಾಗ ಅವರಿಗೆ ಒಂದಲ್ಲ ಒಂದು ದಿನ ಸಾಮಾಜಿಕ ಮಾನ್ಯತೆ, ಪ್ರಶಸ್ತಿ, ಗೌರವ ಬಂದೇ ಬರುತ್ತದೆ.
ಚಹಾ ಮಾರುವವನೊಬ್ಬ ಈ ದೇಶದ ಪ್ರದಾನಿಯಗಬಹುದಾದರೆ, ಶೂ ಪಾಲಿಷ್ ಮಾಡುವವನೊಬ್ಬ ಒಂದು ರಾಷ್ಟ್ರದ ಅಧ್ಯಕ್ಷನಾಗಬಹುದಾದರೆ, ಪ್ರಯತ್ನ ಪಟ್ಟರೆ ಯಾರೂ ಏನೂ ಆಗಬಹುದು. ಆದರೆ ಅದಕ್ಕೆ ಪ್ರಯತ್ನ ಸಾಧನೆ ಅಗತ್ಯ ಎಂದು ಖ್ಯಾತ ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಡಾ| ನಾ. ದಾಮೋದರ ಶೆಟ್ಟಿ ಅವರು ನಗರದ ಶಾರದಾ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಕನ್ನಡ ಉಪನ್ಯಾಸಕರದ ಶ್ರೀ ಸತ್ಯಮೂರ್ತಿ ಕೆ.ಎಂ ಅತಿಥಿಗಳ ಪರಿಚಯ ಮಾಡಿದರು.ಶಾರದಾ ಶಿಕ್ಷಣ ಸಂಸ್ಥೆಗಳ ಸಲಹೆಗಾರರಾದ ಡಾ| ಲೀಲಾ ಉಪಧ್ಯಾಯ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್, ಶಾರದಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಡಾ| ಶ್ರೀಪತಿ ರಾವ್ ಮತ್ತು ಉಪ ಪ್ರಾಂಶುಪಾಲರಾದ ಶ್ರೀ ಮಹಾಬಲೇಶ್ವರ ಭಟ್ ಹಾಗೂ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಲಿಕೆಯಲ್ಲಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಮೊದಲಿಗೆ ವಿದ್ಯಾರ್ಥಿನಿ ಕು| ಪೃಥ್ವಿ ನಾಮದೇವ್ ಸ್ವಾಗತಿಸಿ ಕೊನೆಯಲ್ಲಿ ಮಾ| ನಿಶಾಂತ್ ವಂದಿಸಿದರು. ಮಾ| ಪ್ರಹ್ಲಾದ್ ಕಾರ್ಯಕ್ರಮ ನಿರ್ವಹಿಸಿದರು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.