ನವದೆಹಲಿ: ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದಿದ ನೂತನ ಸಂಸತ್ತು ಕಟ್ಟಡ ಭಾರತದಲ್ಲಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ.
ಪ್ರಸ್ತುತ ಇರುವ 88 ವರ್ಷ ಹಳೆಯ ಸಂಸತ್ತು ಕಟ್ಟಡ ಶಿಥಿಲಗೊಳ್ಳುತ್ತಾ ಬಂದಿದೆ, ಅಲ್ಲದೇ ಭವಿಷ್ಯದಲ್ಲಿ ಅಗತ್ಯವಿರುವ ಸ್ಥಳಾವಕಾಶವನ್ನು ಪೂರೈಸಲೂ ಅದಕ್ಕೆ ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಈ ಬಗ್ಗೆ ಅವರು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದು, ಹೊಸ ಸಂಸತ್ತು ಕಟ್ಟಡ ಸ್ಥಾಪಿಸುವ ಬಗ್ಗೆ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ. ಒಂದಾ ಈಗಿರುವ ಸಂಸತ್ತು ಆವರಣದ ಒಳಗಡೆಯೇ ಅಥವಾ ರಾಜಪಥ್ನಲ್ಲಿ ಹೊಸ ಕಟಟ್ಡ ಸ್ಥಾಪಿಸುವ ಎರಡು ಆಯ್ಕೆಗಳಿವೆ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಹೆಚ್ಚುತ್ತಿರುವ ಸಂಸತ್ತಿಗೆ ಸಂಬಂಧಿತ ಕಾರ್ಯಕ್ರಮಗಳು, ಸಮಿತಿಗಳ ಸಂಖ್ಯೆಯಲ್ಲಿ ಹೆಚ್ಚಳ, ಭದ್ರತಾ ಅಗತ್ಯಗಳಿಂದಾಗಿ ಅತೀ ಹೆಚ್ಚಿನ ಜಾಗದ ಅಗತ್ಯ ಬೀಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಾಜನ್ ಅವರ ಪತ್ರವನ್ನು ಸಂಪುಟದ ಮುಂದಿಡಲು ನಗರಾಭಿವೃದ್ಧಿ ಸಚಿವಾಲಯ ಚಿಂತಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.