ಕೋಟಾ: ಹಲವಾರು ಪ್ರಯತ್ನಗಳ ಬಳಿಕವೂ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಭಾನುವಾರವೂ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡಿದ್ದಾನೆ.
ಎಜುಕೇಶನಲ್ ಹಬ್ ಎನಿಸಿಕೊಂಡಿರುವ ಕೋಟಾದಲ್ಲಿ ಈ ವರ್ಷ ಒಟ್ಟು 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತಕಾರಿಯಾಗಿದೆ.
ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೋಟಾ ಜಿಲ್ಲಾಡಳಿತ ’ಮಸ್ತಿ ಕಿ ಪಾಠ್ಶಾಲಾ’ ಎಂಬ ಅಭಿಯಾನವನ್ನು ಆರಂಭಿಸಿದೆ. ಇದರ ಅನ್ವಯ ಪೇಂಟಿಂಗ್, ಸಂಗೀತ ಮುಂತಾದ ಚಟುವಟಿಕೆಗಳನ್ನು ನಡೆಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆಯನ್ನೂ ನೀಡಿದೆ.
ಅಲ್ಲದೇ ಕೌನ್ಸಿಲಿಂಗ್ ಮಾಡಿಯೇ ಅಡ್ಮಿಷನ್ ಮಾಡಿಕೊಳ್ಳಬೇಕು, ಕೌನ್ಸಿಲರ್ಗಳನ್ನು, ಮನೋತಜ್ಞರನ್ನು ನಿಯೋಜಿಸಬೇಕು, ಗೈರಾಗುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು, ಧ್ಯಾನಕೇಂದ್ರಗಳೊಂದಿಗೆ ಟೈಅಪ್ ಮಾಡಿಕೊಳ್ಳಬೇಕು, ಶೈಕ್ಷಣಿಕೇತರ ಚಟುವಟಿಕೆ ಹಮ್ಮಿಕೊಳ್ಳಬೇಕು, ತರಗತಿಯ ಸಂಖ್ಯೆಯನ್ನು ಕುಗ್ಗಿಸಬೇಕು ಎಂಬ ನಿಯಮಗಳನ್ನು ಜಿಲ್ಲಾಡಳಿತ ಕೋಟಾದ ಶೈಕ್ಷಣಿಕ ಸಂಸ್ಥೆಗಳಿಗೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.