ನವದೆಹಲಿ: ಹೊಸ ವರ್ಷದ ಸಂದರ್ಭದಲ್ಲಿ ಲಷ್ಕರ್-ಇ-ತೋಯ್ಬಾ ಭಾರತದ ವಿವಿಧೆಡೆ ದಾಳಿಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಹೈಅಲರ್ಟ್ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸತ್ತು ಕಟ್ಟಡದ ಮೇಲೆ ದಾಳಿ ಸಂಭವ ಹೆಚ್ಚಾಗಿದೆ. ಅದರೊಂದಿಗೆ ಅಣುಸ್ಥಾವರ ಮತ್ತು ಸೇನಾ ಕೇಂದ್ರಗಳ ಮೇಲೆಯೂ ದಾಳಿ ನಡೆಯುವ ಸಾಧ್ಯತೆ ಇದೆ ಎಂವ ಮಾಹಿತಿ ಇದೆ.
ದಾಳಿಗಳನ್ನು ನಡೆಸುವ ಸಲುವಾಗಿಯೇ 30 ಉಗ್ರರು ಗಡಿ ದಾಟಿ ಭಾರತದೊಳಕ್ಕೆ ನುಸುಳಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಎಲ್ಲಾ ರಾಜ್ಯಗಳಿಗೂ ಗುಪ್ತಚರ ಇಲಾಖೆ ಸೂಚನೆ ರವಾನಿಸಿದ್ದು, ಹೆಚ್ಚು ಜನಸಂದಣಿ ಇರುವ ಜಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸುವಂತೆ ತಿಳಿಸಿದೆ.
ದೆಹಲಿ, ಮುಂಬಯಿ, ಹೈದರಾಬಾದ್, ಚೆನ್ನೈ, ಬೆಂಗಳೂರು, ಕೋಲ್ಕತ್ತಾ, ಗೋವಾಗಳಲ್ಲಿ ಹೊಸವರ್ಷದಂದು ಹೆಚ್ಚುವರಿ ಕಣ್ಗಾವಲು ನೇಮಿಸುವಂತೆ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.