ಶ್ರೀನಗರ: ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ಶಿಪ್ ಸ್ಥಾಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಸಂಘಟನೆಗಳು ಶನಿವಾರ ಕಾಶ್ಮೀರ ಬಂದ್ಗೆ ಕರೆ ನೀಡಿರುವುದರಿಂದ ಅಲ್ಲಿನ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ.
ಅಂಗಡಿಗಳು, ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಪೆಟ್ರೋಲ್ ಬಂಕ್ಗಳು ಶ್ರೀನಗರ ಸೇರಿದಂತೆ ಕಾಶ್ಮೀರದ ಹಲವು ಕಡೆ ಸಂಪೂರ್ಣ ಬಂದ್ ಆಗಿವೆ. ಸರ್ಕಾರಿ ಕಛೇರಿ ಮತ್ತು ಬ್ಯಾಂಕುಗಳು ಕೆಲವು ಕಡೆ ತೆರೆದಿದ್ದವು. ಸಾರಿಗೆ ಸಂಚಾರ ಸ್ಥಗಿತಗೊಂಡಿದೆ.
ನಿನ್ನೆಯೂ ಪ್ರತ್ಯೇಕತಾವಾದಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಪ್ರತ್ಯೇಕ ಟೌನ್ಶಿಪ್ ನಿರ್ಮಿಸುವ ಯಾವುದೇ ಯೋಜನೆಗಳಿಲ್ಲ ಎಂದು ವಿಧಾನಸಭೆಯಲ್ಲಿ ಸ್ಪಷ್ಟಡಿಸಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಅಲ್ಪಸಂಖ್ಯಾತ ಸಮುದಾಯವು ಕಣಿವೆಗೆ ಮರಳಲು ಅಗತ್ಯಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.