ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಲಭವನ ಸೊಸೈಟಿ ಹಾಗೂ ತಾಲೂಕು ಬಾಲಭವನ ಸಮಿತಿ ಇದರ ಸಹಯೋಗದಲ್ಲಿ ತಾಲೂಕಿನ ಮಕ್ಕಳಿಗಾಗಿ ಕಲಾಶ್ರೀ ಆಯ್ಕೆ ಶಿಬಿರ ಗುರುವಾರ ಬಿ.ಸಿ.ರೋಡಿನಲ್ಲಿ ನಡೆಯಿತು.
ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಮಕ್ಕಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸುವ ಮೂಲಕ ತಮ್ಮಲ್ಲಿನ ಕಲಾಪ್ರೌಢಿಮೆಯನ್ನು ವಿಸ್ತಾರಗೊಳಿಸಬೇಕೆಂದು ಕರೆ ನೀಡಿದರು. ಸಾಂಸ್ಕೃತಿಕ ವಾತಾವರಣದಿಂದ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಿದ್ದು, ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಬೇಕು ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಫ್ರಿಯನ್ ಮಿರಾಂದ ಮಾತನಾಡಿ, ಅವಕಾಶದ ಕೊರತೆಯಿಂದ ಹಲವಾರು ಪ್ರತಿಭೆಗಳು ಬೆಳಕಿಗೆ ಬರುವುದಿಲ್ಲ. ಇಂತಹ ಪ್ರತಿಭೆಗಳ ಗುರುತಿಸುವಿಕೆಗೆ ಈ ಆಯ್ಕೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ತೀರ್ಪುಗಾರರಾದ ಬಿ.ರಾಮಚಂದ್ರ ರಾವ್, ಮೌನೇಶ ವಿಶ್ವಕರ್ಮ, ಯೋಗೀಶ ಅಳದಂಗಡಿ, ಗೋಪಾಲ ಅಂಚನ್, ಚೆನ್ನಕೇಶವ, ಜಯಂತಿ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ ಸಿಡಿಪಿಓ ಸುಧಾ ಜೋಷಿ ಸ್ವಾಗತಿಸಿದರು. ಬಂಟ್ವಾಳ ಸಿಡಿಪಿಓ ಮಲ್ಲಿಕಾ ವಂದಿಸಿದರು. ಮೇಲ್ವ್ವಿಚಾರಕಿ ಪುಷ್ಪತಾ ಕಾರ್ಯಕ್ರಮ ನಿರೂಪಿಸಿದರು. ಸ್ತ್ರೀ ಶಕ್ತಿ ಭವನ, ಇಲ್ಲಿನ ಆಶ್ರಮ ಶಾಲೆ ಹಾಗೂ ವಿಕಾಸ ಸೌಧದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.