ನವದೆಹಲಿ: ಎಎಪಿ ಸರ್ಕಾರ ದೆಹಲಿಯಲ್ಲಿ ಜಾರಿಗೊಳಿಸಿರುವ ಸಮ-ಬೆಸ ನಿಯಮವನ್ನು ಬಿಜೆಪಿ ಸ್ವಾಗತಿಸಿದ್ದು, ರಾಷ್ಟ್ರ ರಾಜಧಾನಿಯ ಮಾಲಿನ್ಯವನ್ನು ತಡೆಯಲು ತೆಗೆದುಕೊಂಡು ಅತೀ ಮುಖ್ಯ ಕ್ರಮ ಇದಾಗಿದೆ ಎಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ‘ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾದ ಪ್ರಮುಖ ಯೋಜನೆ ಇದಾಗಿದ್ದು, ಇದನ್ನು ಯಶಸ್ವಿಯಾಗಿ ಜಾರಿಗೊಳಿಸಲು ಜನ ಸಹಕಾರ ನೀಡುತ್ತಿದ್ದಾರೆ’ ಎಂದಿದ್ದಾರೆ.
ಎಎಪಿ ಸರ್ಕಾರ ಈ ವಿಷಯವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಯೋಜನೆ ಮೂಲಕ ರಾಜಕೀಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.