ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ಕಳೆದ ಎರಡು ವರ್ಷದಲ್ಲಿ ಒಟ್ಟು 16 ಕೋಟಿ ಮೌಲ್ಯದ ಒಂದು ರೂಪಾಯಿ ಮುಖ ಬೆಲೆಯ ನೋಟುಗಳನ್ನು ಬಿಡುಗಡೆ ಮಾಡಿದೆ.
ಎರಡು ದಶಕಗಳ ಕಾಲ ಒಂದು ರೂಪಾಯಿ ಮುಖ ಬೆಲೆ ನೋಟುಗಳನ್ನು ಮುದ್ರಿಸಲಾಗಿರಲಿಲ್ಲ. ಬಳಿಕ 2013-14ರ ಅವಧಿಯಲ್ಲಿ 1.ರೂ ನೋಟುಗಳ ಮುದ್ರಣ ಆರಂಭವಾಯಿತು. 1994-95ರಲ್ಲಿ ಒಟ್ಟು 4 ಕೋಟಿ ಮೌಲ್ಯದ 1.ರೂ ನೋಟುಗಳನ್ನು ಮುದ್ರಿಸಲಾಗಿತ್ತು.
ಆರ್ಟಿಐ ಅಡಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಕರೆನ್ಸಿ ನೋಟು ಮುದ್ರಣಾಲಯ, ‘2014-15ನೇ ಸಾಲಿನಲ್ಲಿ 50 ಲಕ್ಷ ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ 15.5 ಕೋಟಿ ಮೌಲ್ಯದ ಒಂದು ರೂಪಾಯಿ ನೋಟುಗಳನ್ನು ಮುದ್ರಿಸಲಾಗಿದೆ’ ಎಂದು ತಿಳಿಸಿದೆ.
ಮುಖಬೆಲೆಗಿಂತ ಹೆಚ್ಚಿನ ಹಣ ವ್ಯಯ ಮಾಡಿ ಒಂದು ರೂಪಾಯಿ ನೋಟುಗಳನ್ನು ಮುದ್ರಣ ಮಾಡಲಾಗುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.