ಪಠಾಣ್ಕೋಟ್ : ಪಠಾಣ್ಕೋಟ್ ವಾಯುನೆಲೆಯಯಲ್ಲಿ ಶಂಕಿತ ಪಾಕಿಸ್ಥಾನಿ ಉಗ್ರರು ನಡೆಸಿರುವ ದಾಳಿಯ ವಿರುದ್ಧ ಕಾರ್ಯಾಚರಣೆ ಸೋಮವಾರಕ್ಕೆ ಅಂತ್ಯಕಂಡಿದೆ. ಸತತ ಮೂರು ದಿನ ನಡೆದ ಕಾರ್ಯಾಚರಣೆಯಲ್ಲಿ ಒಳ ನುಸುಳಿದ್ದ 6 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ಗುಂಪಿನ ಉಗ್ರರು ಈ ದಾಳಿಯನ್ನು ನಡೆಸಿರಬಹುದು ಎಂದು ಶಂಕಿಸಲಾಗಿದೆ. ಕಾಶ್ಮೀರದ ಪ್ರತ್ಯೇಕತೆಗಾಗಿ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರಗಾಮಿ ಸಂಘಟನೆಯಾದ ಸಯ್ಯದ್ ಸಲಾಹುದ್ದೀನ್ ನೇತೃತ್ವದ ಯುನೈಟೆಡ್ ಜಿಹಾದ್ ಕೌನ್ಸಿಲ್ ದಾಳಿಯನ್ನು ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಈ ದಾಳಿಯಲ್ಲಿ ಪಾಕಿಸ್ಥಾನದ ಕೈವಾಡವಿಲ್ಲವೆಂದು ಹೇಳಿದೆ. ಆದರೆ ಭಾರತ ಸರ್ಕಾರದ ಮೂಲಗಳು ದಾಳಿಯ ಹಿಂದೆ ಪಾಕಿಸ್ಥಾನದ ಕೈವಾಡ ಇರುವುದಾಗಿ ಬಲವಾಗಿ ಹೇಳುತ್ತಿದ್ದು, ಜೈಷೇ-ಎ- ಮೊಹಮ್ಮದ್ ಸಂಘಟನೆಯ ಕೈವಾಡವೂ ಇರಬಹುದೆಂದು ಶಂಕಿಸಲಾಗಿದೆ.
ಜನವರಿ 15 ರಂದು ಭಾರತ ಮತ್ತು ಪಾಕಿಸ್ಥಾನ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆಗಳು ನಡೆಯಬೇಕಿತ್ತು. ಈ ಕುರಿತು ನಿರ್ಧಾರವನ್ನು ಸದ್ಯದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.