ರಾಯ್ಪುರ: ಛತ್ತೀಸ್ಗಢದಲ್ಲಿ 48 ಗಂಟೆಯೊಳಗೆ ಮೂರನೇ ಬಾರಿಗೆ ಮತ್ತೊಮ್ಮೆ ನಕ್ಸಲ್ ದಾಳಿ ನಡೆದಿದೆ. ಸೋಮವಾರ ಕಂಕೇರ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ಒರ್ವ ಬಿಎಸ್ಎಫ್ ಯೋಧನನ್ನು ಹತ್ಯೆ ಮಾಡಿದ್ದಾರೆ.
ಬಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೋಟೆ ಬೈತಿಯಾ ಬಿಎಸ್ಎಫ್ ಶಿಬಿರದ ಯೋಧರು ಭಾನುವಾರ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲ್ ತಂಡ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಯೋಧರೂ ಪ್ರತ್ಯುತ್ತರ ನೀಡಿದ್ದಾರೆ. ಬೆಳಿಗ್ಗೆಯವರೆಗೂ ಗುಂಡಿನ ಚಕಮಕಿ ಮುಂದುವರೆದಿದೆ. ಘಟನೆಯಲ್ಲಿ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಜಿತೇಂದ್ರ ಸಿಂಗ್ ಮೀನ ತಿಳಿಸಿದ್ದಾರೆ.
ಮತ್ತೋರ್ವ ಬಿಎಸ್ಎಫ್ ಕಾನ್ಸ್ಟೇಬಲ್ಗೆ ತೀವ್ರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚಿನ ಸೇನಾಪಡೆಗಳನ್ನು ನಿಯೋಜನೆಗೊಳಿಸಲಾಗಿದ್ದು, ನಕ್ಸಲರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಾಗಿದೆ. ಶನಿವಾ ನಡೆದ ಘಟನೆಯಲ್ಲಿ ೯ ಯೋಧರು ಮೃತಾಗಿದ್ದರು. ಭಾನುವಾರ ೧೯ ಸಾರಿಗೆ ವಾಹನಗಳಿಗೆ ಬೆಂಕಿ ಹಚ್ಚಿದ್ದರು ಮತ್ತು ಕಲ್ಲಿದ್ದಲು ಗಣಿಗಾರಿಕೆಯ ಯಂತ್ರಗಳಿಗೂ ಬೆಂಕಿ ಹಾಕಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.