ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ರದ್ದುಗೊಳಿಸಿ ಆದೇಶ ನೀಡಿದೆ.
ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿನೋಟಿಫಿಕೇಶನ್ನಲ್ಲಿ ಅಕ್ರಮ ನಡೆದಿದೆಯೆಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಸಂಬಂಧ ಜಯಕುಮಾರ್ ಹಿರೇಮಠ್ರವರು ದೂರು ಸಲ್ಲಿಸಿದ್ದರು. ಇದರನ್ವಯ ಲೋಕಾಯುಕ್ತ ಪೋಲೀಸರು 15 ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಪ್ರಕರಣಗಳನ್ನು ರದ್ದು ಪಡಿಸುವಂತೆ ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಡಿ. 12 ರಂದು ನಡೆದಿದ್ದು, ತೀರ್ಪನ್ನು ಇಂದು (ಜ. 5) ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ರತ್ನಕಲಾರವರು ಇಂದು ಎಲ್ಲಾ 15 ಪ್ರಕರಣಗಳನ್ನು ರದ್ದುಗೊಳಿಸುವಂತೆ ಆದೇಶ ನೀಡಿದ್ದಾರೆ.
ಇದರಿಂದಾಗಿ ಬಿಎಸ್ವೈರವರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.