ನವದೆಹಲಿ: ಇನ್ಕ್ರೆಡಿಬಲ್ ಇಂಡಿಯಾದ ರಾಯಭಾರಿ ಸ್ಥಾನದಿಂದ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಪ್ರವಾಸೋದ್ಯಮ ಸಚಿವಾಲಯ ತೆಗೆದುಹಾಕಿದೆ ಎಂದು ವರದಿಗಳು ತಿಳಿಸಿವೆ.
ನವೆಂಬರ್ನಲ್ಲಿ ಅಮೀರ್ ಖಾನ್ ಅಸಹಿಷ್ಣುತೆಯ ಬಗ್ಗೆ ನೀಡಿದ್ದ ಹೇಳಿಕೆಯಿಂದಾಗಿ ಅವರು ತಮ್ಮ ರಾಯಭಾರಿ ಸ್ಥಾನವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
‘ಭಾರತದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದ್ದು, ನನ್ನ ಪತ್ನಿ ನಮ್ಮ ಮಗುವಿನ ಸುರಕ್ಷತೆಗಾಗಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದಳು’ ಎಂದು ಸಂದರ್ಶನವೊಂದರಲ್ಲಿ ಅಮೀರ್ ನೀಡಿದ ಹೇಳಿಕೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು. ಅವರ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು.
ಆದರೆ ಬಳಿಕ ನನಗಾಗಲಿ, ನನ್ನ ಪತ್ನಿಗಾಗಲಿ ದೇಶ ಬಿಡುವ ಯಾವುದೇ ಚಿಂತನೆ ಇಲ್ಲ. ನಾವು ಭಾರತೀಯರು ಎಂಬ ಹೆಮ್ಮೆ ನಮಗಿದೆ ಎಂದು ವಿವಾದಕ್ಕೆ ತೇಪೆ ಹಚ್ಚುವ ಕಾರ್ಯ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.