ನವದೆಹಲಿ : ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಗುರುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಕುತ್ತಿಗೆ ನೋವು ಮತ್ತು ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರು ಡಿಸೆಂಬರ್ 24 ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ 79 ವರ್ಷ ವಯಸ್ಸಾಗಿತ್ತು. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಶ್ರೀನಗರಕ್ಕೆ ಇಂದು ಕೊಂಡೊಯ್ಯಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ದಕ್ಷಿಣ ಕಾಶ್ಮೀರದಲ್ಲಿರುವ ಅವರ ಪೂರ್ವಜರ ಗ್ರಾಮದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರುವ ಸಾಧ್ಯತೆ ಇದೆ.
ಮಾ.1, 2015ರಂದು ಇವರು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಇದೀಗ ಅವರ ಸ್ಥಾನವನ್ನು ಅವರ ಮಗಳು ಮೆಹಬೂಬ ಮುಫ್ತಿ ಅಲಂಕರಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.