ಮುಂಬಯಿ: ಒಂದೇ ಇನ್ನಿಂಗ್ಸ್ನಲ್ಲಿ 1009 ರನ್ ಗಳಿಸಿ ಇತಿಹಾಸ ನಿರ್ಮಿಸಿದ ಪ್ರಣವ್ ಧನವಾಡೆಗೆ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ತಮ್ಮ ಹಸ್ತಾಕ್ಷರವುಳ್ಳ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಪ್ರಣವ್ ಮಾಡಿದ ಈ ಸಾಧನೆಗೆ ಸಚಿನ್ ಅವರು ಅಭಿನಂದಿಸಿದ್ದಾರೆ. ’ನಿನಗೆ ಅಭಿನಂದನೆಗಳು, ನೀನು 1000 ರನ್ ಗಳಿಸಿದ ಮೊದಲ ಬ್ಯಾಟ್ಸಮನ್ ಆಗಿದ್ದು, ಇನ್ನಷ್ಟು ಶ್ರಮವಹಿಸುವ ಅಗತ್ಯವಿದೆ. ಉತ್ತಮ ನಿರ್ವಹಣೆಯೊಂದಿಗೆ ಹೊಸ ಶಿಖರಗಳನ್ನು ಏರಬೇಕಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಮುಂಬಯಿಯ ಕೆ.ಸಿ. ಗಾಂಧಿ ಪ್ರೌಢಶಾಲೆಯ ಆರಂಭಿಕ ಬ್ಯಾಟ್ಸ್ಮನ್ ಪ್ರಣವ್, ಮುಂಬಯಿ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಭಂಡಾರಿ ಕಪ್ ಅಂತರ್-ಶಾಲಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್ಯ ಗುರುಕುಲ ವಿರುದ್ಧ ಈ ಸಾಧನೆ ಮಾಡಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.