ಬೆಂಗಳೂರು: ಪಠಾನ್ಕೋಟ್ ವಾಯುನೆಲೆಯ ಮೇಲಿನ ದಾಳಿಯ ಆಘಾತದಿಂದ ಈಗಷ್ಟೇ ಭಾರತ ಚೇತರಿಸಿಕೊಳ್ಳುತ್ತಿದೆ, ಆದರೆ ಇದೇ ವೇಳೆ ಬೆಂಗಳೂರಿನ ಮದರಸಾದ ಗುರುವೊಬ್ಬ ಭಯೋತ್ಪಾದಕರ ಜೊತೆ ನಂಟು ಇರುವ ಆರೋಪದ ಮೇರೆಗೆ ಬಂಧಿತನಾಗಿದ್ದಾನೆ. ಇದು ಭಾರತೀಯರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.
ಈತನನ್ನು ಮೌಲನಾ ಅಂಝರ್ ಶಾ ಎಂದು ಗುರುತಿಸಲಾಗಿದ್ದು, ಅಲ್ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ. ಈತನನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಈತ ದೇಶದಾದ್ಯಂತ ಸರಣಿ ಭಯೋತ್ಪಾದನಾ ದಾಳಿಗಳನ್ನು ನಡೆಸಲು ಯೋಜನೆ ರೂಪಿಸುತ್ತಿದ್ದ. ಉನ್ನತ ನಾಯಕರುಗಳ ಮೇಲೆ, ಜನಸಂದಣಿ ಇರುವ ಸ್ಥಳಗಳ ಮೇಲೆ ದಾಳಿ ನಡೆಸುವುದು ಈತನ ಯೋಜನೆಯಾಗಿತ್ತು.
ಈತನನ್ನು ದೆಹಲಿಗೆ ಕರೆತರಲಾಗಿದ್ದು, ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಜ.20 ರ ವರೆಗೆ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈಗಾಗಲೇ ಕಸ್ಟಡಿಯಲ್ಲಿರುವ ಉಗ್ರ ಮೊಹಮ್ಮದ್ ಆಸೀಫ್, ಅಂಝರ್ನನ್ನು ಧಾರ್ಮಿಕ ಸ್ಥಳವೊಂದರಲ್ಲಿ ಭೇಟಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.